ಯುವಕನ ಶವ ಪತ್ತೆ, ಕೊಲೆ ಶಂಕೆ

ರಾಯಚೂರು: ಲಿಂಗಸುಗೂರು ತಾಲ್ಲೂಕಿನ ಗುರುಗುಂಟಾ ಗ್ರಾಮದಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತನನ್ನು ರಮೇಶ್ (19) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಊಟ ಮಾಡಿ ಮನೆಯಿಂದ ಹೋರಹೋಗಿದ್ದ ರಮೇಶ, ತಿರುಗಿ ಮನೆಗೆ ಬಾರದ ಕಾರಣ ಮನೆಯವರು ಹುಡುಕಾಟ ನಡೆಸಿದ್ದಾರೆ. ಆಗ ರಮೇಶ್​ ಗ್ರಾಮದ ಪಂಚಾಯಿತಿ ಹಿಂಬದಿ ಶವವಾಗಿ ಪತ್ತೆಯಾಗಿದ್ದಾನೆ. ಇನ್ನು, ಸ್ಥಳಕ್ಕೆ ಹಟ್ಟಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.