ಐವರು ಅಂತಾರಾಜ್ಯ ದರೋಡೆಕೋರರು ಅಂದರ್!

ಚಾಮರಾಜನಗರ:  ಕೇರಳ ವ್ಯಕ್ತಿಯನ್ನು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣ ಸಂಬಂಧ ಐವರು ಅಂತಾರಾಜ್ಯ ದರೋಡೆಕೋರರನ್ನು  ಗುಂಡ್ಲುಪೇಟೆ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಶೈಜು, ಅಜಿನ್​, ಸೈಜು, ಗೋಕುಲ್​, ಸಂದೀಪ್​  ಬಂಧಿತ ಆರೋಪಿಗಳು.

ಜನವರಿ 14 ರಂದು ಸುಲ್ತಾನ್​ವತ್ತೇರಿ ರಸ್ತೆಯ ಕಗ್ಗಳಹುಂಡಿಯ ಬಳಿ ಕೇರಳದ ಅಬ್ದುಲ್ಲಾ ಎಂಬುವವರ ಕಾರನ್ನು ಅಡ್ಡಗಟ್ಟಿ 38 ಸಾವಿರ ಹಣವನ್ನು ದರೋಡೆ ಮಾಡಿದ್ದರು. ಪ್ರಕರಣ ಸಂಬಂಧ 15 ಜನರ ವಿರುದ್ದ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಗಳಿಗೆ ಬಲೆ ಬೀಸಿದ್ದರು. ಕೇರಳಕ್ಕೆ ತೆರಳಿ ಆರೋಪಿಗಳ ಮಾಹಿತಿ ಕಲೆಹಾಕಿದ್ದರು.

ಕೊನೆಗೂ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ 2500 ರೂಪಾಯಿ ನಗದು, 5 ಕಾರುಗಳನ್ನು ವಶಪಡಿಸಿಕೊಂಡಿದ್ದು ತನಿಖೆ ಮುಂದುವರಿದಿದೆ. ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರೆಸಿದ್ದಾರೆ.

Leave a Reply

Your email address will not be published. Required fields are marked *