ವಿಫಲ ಯತ್ನದ ನಂತರ ಮತ್ತೆ ಅದೇ ಮನೆಗೆ ಕನ್ನ ಹಾಕಿದರು ಕಳ್ಳರು..!

ಕಲಬುರ್ಗಿ: ನಗರದ ವಕೀಲರೊಬ್ಬರ ಮನೆಯಲ್ಲಿ ಕಳ್ಳತನ ನಡೆದಿದೆ. ವಕೀಲೆ ಅನುರಾಧ ದೇಸಾಯಿ ಎಂಬುವವರ ಮನೆಗೆ ನುಗ್ಗಿದ ಕಳ್ಳರು ಮನೆಯಲ್ಲಿದ್ದ 80 ಗ್ರಾಂ ಚಿನ್ನ, ಬೆಳ್ಳಿ ಹಾಗೂ ₹30 ಸಾವಿರ ನಗದು ದೋಚಿ ಪರಾರಿಯಾಗಿದ್ದಾರೆ. ಶುಕ್ರವಾರ ತಡರಾತ್ರಿ ಕಳ್ಳರು ಇದೇ ಮನೆಯಲ್ಲಿ ಕಳ್ಳತನ ಯತ್ನ ನಡೆಸಿದ್ದರು. ಆದರೆ ಇಂದು ಅದೇ ಮನೆಯಲ್ಲಿ ಕಳ್ಳತನ ನಡೆಸಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.com