ಕಾಂಗ್ರೆಸ್-ಬಿಜೆಪಿ ನೇರ ಪೈಪೋಟಿ, ಈ ಬಾರಿ ಕಾಂಗ್ರೆಸ್ ಗೆಲ್ಲುತ್ತೆ -ಶಾಮನೂರು

ದಾವಣಗೆರೆ: ಜಿಲ್ಲೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಮಧ್ಯೆ ನೇರ ಪೈಪೋಟಿ ಇದೆ ಎಂದು ದಕ್ಷಿಣ ಕೇತ್ರದ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ನಗರದ ಪಿ.ಬಿ ರಸ್ತೆಯ ಪಾದಾಚಾರಿ ಮಾರ್ಗ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಪೈಪೋಟಿ ಇರುವುದರಿಂದ ಈ ಬಾರಿ ಕಾಂಗ್ರೆಸ್ ಗೆಲ್ಲುತ್ತದೆ ಎಂದರು. ಸಂಸದ ಜಿ.ಎಂ ಸಿದ್ದೇಶ್ವರ ‌ಹೇಳಿಕೆಗೆ ಸಂಬಂಧಪಟ್ಟಂತೆ ಮಾತನಾಡಿದ ಅವರು, ಸಿದ್ದೇಶ್ವರಗೆ ಇನ್ನೂ ವಯಸ್ಸಿದೆ. ಈಗಾಗ್ಲೇ ಚುಣಾವಣೆ ತ್ಯಾಗದ ಬಗ್ಗೆ ಮಾತನಾಡುವುದು ಬೇಡ. ಚುನಾವಣೆಯಲ್ಲಿ ಸ್ಪರ್ಧಿಸಲಿ ಎಂದು ಸಂಸದ ಜಿಎಂ ಸಿದ್ದೇಶ್ವರ್‌ಗೆ ಶಾಮನೂರು ಕಿವಿಮಾತು ಹೇಳಿದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv