ಮರ ಬಿದ್ದು ಕಾರು ಜಖಂ, ರಸ್ತೆ ಸಂಚಾರ ಅಸ್ತವ್ಯಸ್ತ..!

ಬೆಂಗಳೂರು: ನಗರದ ರಾಮಕೃಷ್ಣ ಆಶ್ರಮ ಸರ್ಕಲ್ ಸಮೀಪ ಮಧ್ಯಾಹ್ನ ಕಾರಿನಲ್ಲಿ ನಮಾಜ್ ಗೆ ತೆರಳುತ್ತಿದ್ದ ವೇಳೆ ಕಾರಿನ ಮೇಲೆ ಮರಬಿದ್ದು ಕಾರಿನಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಮರ ಬಿದ್ದ ಪರಿಣಾಮ ಕಾರು ಜಖಂಗೊಂಡಿದೆ. ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ. ಸ್ಥಳಕ್ಕಾಗಮಿಸಿದ ಬಿಬಿಎಂಪಿ ಸಿಬ್ಬಂದಿ, ಸಂಚಾರಿ ಪೊಲೀಸರು ಮರ ತೆರವುಗೊಳಿಸಿದರು. ಘಟನೆ ಕುರಿತು ಬಸವನಗುಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv