ಟಿಪ್ಪರ್ ಹರಿದು ವೃದ್ಧ ಸ್ಥಳದಲ್ಲೇ ಸಾವು​

ಕಲಬುರ್ಗಿ: ಟಿಪ್ಪರ್ ಹರಿದು ವೃದ್ಧನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ರಿಂಗ್ ರಸ್ತೆಯಲ್ಲಿ ನಡೆದಿದೆ. ನಗರದ ಎಂ.ಎಸ್.ಕೆ ಮಿಲ್ ನಿವಾಸಿ ಲಿಯಾಖತ್ ಅಲಿಖಾನ್ (62) ಮೃತರು. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಇನ್ನು ಹಿಂದಿನಿಂದ ಬರುತ್ತಿದ್ದ ಟಿಪ್ಪರ್​ ಹರಿದಿದೆ. ಪರಿಣಾಮ ಲಿಯಾಖತ್ ಅಲಿಖಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಮಹಾತ್ಮ ಬಸವೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv