ಭಾರತ ಬಂದ್; ಬಸ್ ನಿಲ್ದಾಣದಲ್ಲಿ ಬೆಂಚ್ ಮೇಲೆಯೇ ಮಲಗಿದ ಗರ್ಭಿಣಿ..!

ದಾವಣಗೆರೆ: ಮೋಟಾರು ವಾಹನ ತಿದ್ದುಪಡಿ ಮಸೂದೆ -2017 ಹಿಂಪಡೆಯಲು, ಸಾರಿಗೆ ಉದ್ದಿಮೆಯನ್ನ ರಕ್ಷಿಸಲು ಮತ್ತು ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಂದು, ನಾಳೆ ಭಾರತ್ ಬಂದ್​ಗೆ ಕರೆ ನೀಡಲಾಗಿದೆ. ಬಂದ್ ಹಿನ್ನೆಲೆಯಲ್ಲಿ  ಬಸ್ ಇಲ್ಲದೇ ಬೆಂಚ್ ಮೇಲೆ ಗರ್ಭಿಣಿಯೊಬ್ಬರು ಮಲಗಿದ್ದ ಅಮಾನವೀಯ ಘಟನೆ ದಾವಣಗೆರೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಕಂಡುಬಂತು. ಗರ್ಭಿಣಿ ಬಸ್‌ಗಾಗಿ ಕಾದು ಕುಳಿತಿದ್ದರು. ಆದರೆ, ಕೆಎಸ್‌ಆರ್‌ಟಿಸಿ ಸಿಬ್ಬಂದಿ ಬಸ್​ ಸಂಚಾರ ಸ್ಥಗಿತಗೊಳಿಸಿದ್ದರು. ಇದರಿಂದಾಗಿ ಗರ್ಭಿಣಿಗೆ ಬೆಂಚ್ ಮೇಲೆಯೇ ಮಲಗುವುದು ಅನಿವಾರ್ಯವಾಯಿತು. ಚಿತ್ರದುರ್ಗದ ಹಿರಿಯೂರು ತಾಲೂಕಿನ ಅದಿವಾಲ ಗ್ರಾಮದ ನಿವಾಸಿ ಆಕೆ, ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮೂರು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ತಮ್ಮ ಮನೆಗೆ ವಾಪಸ್ ತೆರಳಲು ಬಸ್‌ಗಾಗಿ ಕಾದು ಕುಳಿತಿದ್ದರು. ಆದ್ರೆ ಬಸ್ ಸಂಚಾರ ಸ್ಥಗಿತಗೊಂಡಿರುವುದರಿಂದ ಆಕೆ ಬಸ್​ ನಿಲ್ದಾಣದಲ್ಲಿಯೇ ಕಾಲ ಕಳೆಯುವಂತಾಗಿದ್ದು, ಸಂಬಂಧಿಕರು ಕೂಡ ದಿಕ್ಕು ತೋಚದಂತಾಗಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: conatct@firstnews.tv