ಗಾಳಿ, ಮಳೆಗೆ ಮನೆ ಮೇಲೆ ಉರುಳಿ ಬಿದ್ದ ಮರ

ಕೊಡಗು: ಕೊಡಗಿನಲ್ಲಿ ವರುಣನ ಜೊತೆಗೆ ಗಾಳಿಯ ಆರ್ಭಟ ಜೋರಾಗಿದ್ದು, ಭಾರೀ ಗಾಳಿ ಮಳೆಗೆ ಮನೆ ಮೇಲೆ ಮರ ಬಿದ್ದ ಘಟನೆ, ಕಡಗದಾಳು ಗ್ರಾಮದಲ್ಲಿ ನಡೆದಿದೆ.
ಮುಕ್ಕಾಟಿರ ಇಂದಿರಾ ಸೋಮಯ್ಯ ಎಂಬವರಿಗೆ ಸೇರಿದ ಮನೆಯ ಮೇಲೆ ಮರ ಮುರಿದು ಬಿದ್ದಿದೆ. ಘಟನೆಯಲ್ಲಿ ಮನೆಗೆ ಭಾಗಶಃ ಹಾನಿಯಾಗಿದ್ದು, ಅದೃಷ್ಟವಶಾತ್​ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv