ಹೇಳಿದಂತೆ ಟ್ರಬಲ್ ಶೂಟರ್ ಆದ್ರು ಸಿದ್ದರಾಮಯ್ಯ..!

ಬೆಂಗಳೂರು: ಬಳ್ಳಾರಿ ಲೋಕಸಭಾ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕೊನೆಗೂ ಮಾಜಿ ಸಿಎಂ ಸಿದ್ದರಾಮಯ್ಯ ಅಖಾಡಕ್ಕೆ ಇಳಿದಿದ್ದಾರೆ. ಬಳ್ಳಾರಿ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್​ ನೇತೃತ್ವದಲ್ಲಿ ಮೂರು ಸಭೆಗಳು ನಡೆದರೂ ಅಭ್ಯರ್ಥಿ ಆಯ್ಕೆ ಕಗ್ಗಂಟಾಗೇ ಉಳಿದಿತ್ತು. ಮೇಲಾಗಿ ಆ ಸಭೆಗಳಿಗೆ ಕೆಲ ಶಾಸಕರು ಹಾಜರಾಗದೆ ದೂರ ಉಳಿದಿದ್ದರು. ಈ ಹಿನ್ನೆಲೆಯಲ್ಲಿ ಸ್ವತಃ ಸಿದ್ದರಾಮಯ್ಯ ಅವರೇ ಅಖಾಡಕ್ಕೆ ಧುಮುಕಿದ್ದರು.

ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಗೆ ಬಳ್ಳಾರಿ ಜಿಲ್ಲೆಯ ಎಲ್ಲಾ ಆರೂ ಶಾಸಕರು ಭಾಗಿಯಾಗಿದ್ರು. ಅಲ್ಲದೇ ಸಭೆಯಲ್ಲಿ ಸಿದ್ದರಾಮಯ್ಯ ಮಾತಿಗೆ ಯಾವ ಶಾಸಕರೂ ಮರು ಮಾತಾಡಲಿಲ್ಲ. ಸಿದ್ದರಾಮಯ್ಯ ಹೇಳಿದ ಮಾತಿಗೆ ಎಲ್ಲರೂ ಓಕೆ ಎಂದರು. ಈ ಮೂಲಕ ಪಕ್ಷದಲ್ಲಿ ತಾನೆಷ್ಟು ಪ್ರಬಲವಾಗಿದ್ದೇನೆ ಎಂಬುದನ್ನ ಸಿದ್ದರಾಮಯ್ಯ ಮತ್ತೊಮ್ಮೆ ತೋರಿಸಿದ್ದಾರೆ. ಡಿ.ಕೆ.ಶಿವಕುಮಾರ್​ ನಿಭಾಯಿಸಲಾಗದ ಕೆಲಸವನ್ನ ಸಿದ್ದರಾಮಯ್ಯ ಮಾಡಿ ತೋರಿಸಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv