ಇಬ್ಬರ ಪ್ರಾಣ ತೆಗೆದ ಯಮಸ್ವರೂಪಿ ಲಾರಿ

ತುಮಕೂರು: ಲಾರಿ, ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಹೆಬ್ಬೂರು ಕೋಡಿಪಾಳ್ಯದಲ್ಲಿ ನಡೆದಿದೆ.
ಗುಬ್ಬಿ ತಾಲೂಕಿನ ದೊಡ್ಡಗುಣಿ ನಿವಾಸಿಗಳಾದ ರಮೇಶ (28), ರಾಮಾಂಜಿ (30) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಲಾರಿ ಚಾಲಕನನ್ನು ಹೆಬ್ಬೂರು ಠಾಣೆ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.