ಟಂಟಂ ಪಲ್ಟಿ ವೃದ್ಧೆ ಸ್ಥಳದಲ್ಲೇ ಸಾವು, ಇಬ್ಬರ ಸ್ಥಿತಿ ಗಂಭೀರ

ಬಾಗಲಕೋಟೆ: ಚಾಲಕನ ನಿಯಂತ್ರಣ ತಪ್ಪಿ ಟಂಟಂ ಪಲ್ಟಿಯಾಗಿ ವೃದ್ಧೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಎಂಟು ಜನ ಗಾಯಗೊಂಡಿರುವ ಘಟನೆ ಬದಾಮಿ ನಗರ ರೈಲು ನಿಲ್ದಾಣದ ಬಳಿ ನಡೆದಿದೆ. ಹಿರೆಮುಚ್ಚಳಗುಡ್ಡ ಗ್ರಾಮದಿಂದ ಬದಾಮಿ ಕಡೆ ತೆರಳುತ್ತಿದ್ದ ಟಂಟಂ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಹಿರೆಮುಚ್ಚಳಗುಡ್ಡ ಗ್ರಾಮದ ನಿವಾಸಿ ಗುಳ್ಳವ್ವ ಹನುಮಗೌಡರ (65) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಎಂಟು ಜನ ಗಾಯಗೊಂಡಿದ್ದು, ಅದರಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಾಗಳುಗಳನ್ನು ಬದಾಮಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿದ ಬದಾಮಿ ಪೊಲೀಸರು ಪರಿಶೀಲನೆ ನಡೆಸಿದ್ರು, ಬದಾಮಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.