ಜುಲೈ 5 ರಂದು ಟಿಬಿ ಜಲಾಶಯದಲ್ಲಿ ಹೂಳಿನ ಜಾತ್ರೆ

ಬಳ್ಳಾರಿ: ತುಂಗಭದ್ರಾ ಅಣೆಕಟ್ಟೆಯಲ್ಲಿ ಜುಲೈ 5 ರಂದು ಒಂದು ದಿನದ ಸಾಂಕೇತಿಕ ಹೂಳಿನ ಜಾತ್ರೆ ನಡೆಯಲಿದೆ. ಈ ಭಾಗದ ರೈತ ಸಂಘಟನೆಗಳು ಹಾಗೂ ಪ್ರಗತಿಪರ ರೈತರು ಈ ಜಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪುರುಷೋತ್ತಮ ಗೌಡ ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಟಿಬಿ ಜಲಾಶಯದಲ್ಲಿ ಈಗಾಗಲೇ 28 ಟಿಎಂಸಿ ನೀರು ಸಂಗ್ರಹವಾಗಿದೆ. ಇನ್ನೂ ಹೆಚ್ಚಿನ ಒಳಹರಿವು ಬರುತ್ತಿದೆ. ಹೀಗಾಗಿ ಕಾಲುವೆ ಮೂಲಕ ರೈತರ ಹೊಲಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು. ರೈತರ ಸಾಲ ಮನ್ನಾ ಮಾಡೋದಾಗಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. 2009ರಿಂದ 2017ಮೇ ವರೆಗಿನ ರೈತರ ಸಾಲ ಮನ್ನಾ ಮಾಡೋದಾಗಿ ಅವರು ಹೇಳಿದ್ದಾರೆ. ಆದರೆ 2018 ಮೇ ವರೆಗಿನ ಸಾಲ ಮನ್ನಾ ಮಾಡಬೇಕೆನ್ನುವುದು ನಮ್ಮ ಬೇಡಿಕೆಯಾಗಿದೆ. ಸದ್ಯ ಬಳ್ಳಾರಿ ಜಿಲ್ಲೆಯ ರೈತರಿಗೆ 7 ತಾಸು ವಿದ್ಯುತ್ ನೀಡಲಾಗುತ್ತಿದೆ. ಇನ್ಮುಂದೆ ಕನಿಷ್ಟ 12 ತಾಸು ನಿರಂತರ ವಿದ್ಯುತ್ ನೀಡಬೇಕು ಎಂದು ಜಿ ಪುರುಷೋತ್ತಮ ಗೌಡ ಒತ್ತಾಯಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv