ಗೋಡೆ ಕುಸಿದು ಇಬ್ಬರು ಕಾರ್ಮಿಕರಿಗೆ ಗಾಯ

ರಾಮನಗರ: ಕಟ್ಟಡವೊಂದರಲ್ಲಿ ಸಂಪ್ ನಿರ್ಮಾಣ ಮಾಡುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಾಗಡಿ ಪಟ್ಟಣದ ಕಲ್ಯಾ ಗೇಟ್ ಬಳಿ‌ ಗುರುವಾರ ಸಂಜೆ ಘಟನೆ ನಡೆದಿದೆ. ಗಾಯಾಳುಗಳನ್ನು ಆಂಧ್ರ ಮೂಲದ ರಾಮಚಂದ್ರ (57) ಹಾಗೂ ವೆಂಕಟೇಶ್ (45) ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *