2 ಗುಂಪಿನ ಮಧ್ಯೆ ಮಾರಾಮಾರಿ, ಕಲ್ಲುಗಳಿಂದ ಹೊಡೆದಾಡಿಕೊಂಡ ಯುವಕರು

ದಾವಣಗೆರೆ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನ ನಡುವೆ ಮಾರಾಮಾರಿ ನಡೆದಿರುವ ಘಟನೆ ದಾವಣಗೆರೆಯ ಬಾಪೂಜಿ ಸಮುದಾಯದ ಭವನದ ಮುಂಭಾಗದ ರಿಂಗ್ ರಸ್ತೆಯಲ್ಲಿ ನಡೆದಿದೆ. 10ಕ್ಕೂ ಹೆಚ್ಚು ಯುವಕರು ಇನ್ನೊಂದು ಗುಂಪಿನ ಯುವಕರನ್ನ ಸಿನಿಮಾ ಶೈಲಿಯಲ್ಲಿ ಥಳಿಸಿದ್ದಾರೆ. ಯುವಕರು ಪರಸ್ಪರ ಕಲ್ಲುಗಳಿಂದ ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮೊನ್ನೆಯಷ್ಟೇ ಎರಡು ಗುಂಪುಗಳು ಜಿಲ್ಲಾಸ್ಪತ್ರೆಯ ಮುಂಭಾಗ ಹೊಡೆದಾಡಿಕೊಂಡಿರುವ ವಿಡಿಯೋ ವೈರಲ್ ಆಗಿತ್ತು. ಈಗ ಮತ್ತೆ ಎರಡು ಗುಂಪಿನ ಯುವಕರು ಬಡದಾಡಿಕೊಂಡಿದ್ದಾರೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ‌ ಈ ಘಟನೆ ನಡೆದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv