‘ಈ ಬಾರಿಯೂ ಇಫ್ತಾರ್ ಕೂಟ ಏರ್ಪಡಿಸುತ್ತೇನೆ’

ಉಡುಪಿ: ಕಳೆದ ಬಾರಿ ಉಡುಪಿಯಲ್ಲಿ ಪೇಜಾವರ ಶ್ರೀಗಳು‌ ಇಫ್ತಾರ್ ಕೂಟ ಏರ್ಪಡಿಸಿ ಪರ ವಿರೋಧಗಳನ್ನು ಎದುರಿಸಿದ್ದರು. ಕಳೆದ ಬಾರಿಯಂತೆ ಈ ಬಾರಿ ಈ ಬಾರಿಯೂ ಇಫ್ತಾರ್ ಕೂಟ ಮಾಡಬೇಕೆಂಬ ಅಭಿಲಾಷೆ ಇದೆ, ಇದಕ್ಕೆ ಮುಸಲ್ಮಾನ ನಾಯಕರು, ಪ್ರಮುಖರು ಸಮ್ಮತಿ ಸೂಚಿಸಿದರೆ ಈ ಬಾರಿಯೂ ಇಫ್ತಾರ್ ಕೂಟ ಮಾಡುತ್ತೇನೆ ಎಂದು ಪೇಜಾವರ ಶ್ರೀಗಳು ತಿಳಿಸಿದರು
ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಈ ಬಾರಿ ಮುಸ್ಲೀಮರಿಗೆ ಇಫ್ತಾರ್ ಕೂಟಕ್ಕೆ ಉತ್ಸಾಹ ಇದ್ದಂತೆ ಕಾಣುತ್ತಿಲ್ಲ. ಅಲ್ಲದೇ ಮುಸಲ್ಮಾನರು ಮೂರ್ತಿ ಇರುವಲ್ಲಿ ಕಾರ್ಯಕ್ರಮ ಆಯೋಜಿಸಲು ಒಪ್ಪುತ್ತಿಲ್ಲ. ಒಪ್ಪಿದರೆ ಗೋವಿಂದ ಕಲ್ಯಾಣ ಮಂಟಪದಲ್ಲಿ ಸತ್ಕಾರ ಕೂಟ ಆಯೋಜಿಸುವ ಆಲೋಚನೆಯಿದೆ ಎಂದು ಹೇಳಿದರು.
ಸಂವಿಧಾನ ಬದಲಿಸಿ ಅಂತ ನಾನು ಯಾವತ್ತೂ ಹೇಳಿಲ್ಲ. ದೇಶದಲ್ಲಿ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಒಂದೇ ನ್ಯಾಯ ಇರಬೇಕು. ನಾನು ಅಂಬೇಡ್ಕರ್ ವಿರೋಧಿಯಲ್ಲ. ಸಂವಿಧಾನದಲ್ಲಿ ತಿದ್ದುಪಡಿ ಆಗಬೇಕು. ಎಲ್ಲಾ ಧರ್ಮ, ಜಾತಿಯವರೊಂದಿಗೆ ನಾನು ಚೆನ್ನಾಗಿದ್ದೇನೆ. ಶಿಕ್ಷಣ, ಆಹಾರ, ಸರ್ಕಾರದ ಯೋಜನೆ ಎಲ್ಲಾ ಧರ್ಮದ ಬಡವರಿಗೆ ಸಿಗುವಂತಾಗಬೇಕು‌ ಎಂದು ತಿಳಿಸಿದರು‌.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv