ದಾಖಲೆಗಳಿಲ್ಲದ ₹52 ಲಕ್ಷ ಹಣ ವಶಕ್ಕೆ

ಬೆಂಗಳೂರು: ರಾಣಿಕ್ರಾಸ್ ಚೆಕ್ ಪೋಸ್ಟ್ ಬಳಿ ಸೂಕ್ತ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 52ಲಕ್ಷ 70 ಸಾವಿರ ನಗದನ್ನು ನಿನ್ನೆ ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ದೇವನಹಳ್ಳಿ ಪ್ಲೈಯಿಂಗ್​ಸ್ಕ್ವಾಡ್ ನಡೆಸಿದ ಕಾರ್ಯಾಚರಣೆಯಲ್ಲಿ, ಆಂಧ್ರದಿಂದ ಕರ್ನಾಟಕಕ್ಕೆ ಬರುತ್ತಿದ್ದ ತಮಿಳುನಾಡು ನೊಂದಣಿಯ ಬಸ್ಸಿನಲ್ಲಿ ನಗದು ಸಿಕ್ಕಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಪಾಲಯ್ಯ, ಗ್ರಾಮಾಂತರ ಎಸ್​ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *