ಪೊಲೀಸ್ ಬೈಕ್​ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಕೊಡಗು: ಪೊಲೀಸ್ ಪೇದೆಯೊಬ್ಬರ ಬೈಕ್‍ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ವಿರಾಜಪೇಟೆ ತಾಲೂಕಿನ ಚೆನ್ನಯ್ಯನಕೋಟೆಯಲ್ಲಿ ನಡೆದಿದೆ. ಚೆನ್ನಯ್ಯನಕೋಟೆ ಉಪಠಾಣೆಯ ಪೇದೆ ವಸಂತ ಎಂಬುವವರು ಸ್ಟೇಷನ್ ಎದುರು ತನ್ನ ಹೀರೋಹೊಂಡ ಸ್ಪ್ಲೆಂಡರ್ ಬೈಕ್ ನಿಲ್ಲಿಸಿದ್ದರು. ಭಾನುವಾರ ಮಧ್ಯರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ. ತಕ್ಷಣ ಎಚ್ಚೆತ್ತ ಸಿಬ್ಬಂದಿ ನೀರು ಹಾಕಿ ಬೆಂಕಿ ನಂದಿಸಲು ಪ್ರಯತ್ನಿಸಿದ್ರೂ ಪ್ರಯೋಜನವಾಗಿಲ್ಲ. ಬೈಕ್ ಸಂಪೂರ್ಣ ಸುಟ್ಟು ಹೋಗಿದ್ದು, ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.