ಹುಬ್ಬಳ್ಳಿಯಲ್ಲಿಂದು ಪ್ರಹ್ಲಾದ್​ ಜೋಶಿ ಪರ ಸಚಿವೆ ಸುಷ್ಮಾ ಸ್ವರಾಜ್​ ಪ್ರಚಾರ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಚುನಾವಣಾ ಅಖಾಡ ರಂಗೇರಿದೆ. ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್​ ಜೋಶಿ ಪರ ಬಿಜೆಪಿ ದಿಗ್ಗಜರು ಪ್ರಚಾರದ ಅಖಾಡಕ್ಕೆ ಧುಮುಕಿದ್ದಾರೆ. ಹುಬ್ಬಳ್ಳಿಯಲ್ಲಿಂದು ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್, ಪ್ರಹ್ಲಾದ್​ ಜೋಶಿ ಪರ ಪ್ರಚಾರ ನಡೆಸಲಿದ್ದಾರೆ. ನಗರದ ಗೋಕುಲ್ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಸಾರ್ವಜನಿಕ ಸಭೆ ಕರೆಯಲಿರುವ ಸುಷ್ಮಾ ಸ್ವರಾಜ್​ ಮತಯಾಚನೆ ಮಾಡಲಿದ್ದಾರೆ. ಈ ವೇಳೆ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರಳಿಧರ್​ ರಾವ್ ಕೂಡಾ ಸುಷ್ಮ ಸ್ವರಾಜ್​ಗೆ ಸಾಥ್​ ನೀಡಲಿದ್ದಾರೆ.

ಮಧ್ಯಾಹ್ನ 1:30 ರ ಸುಮಾರಿಗೆ ದೆಹಲಿಯಿಂದ ವಿಶೇಷ ವಿಮಾನ‌‌ದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸುಷ್ಮಾ ಸ್ವರಾಜ್​​ ಆಗಮಿಸಲಿದ್ದಾರೆ. ನಂತರ ವಿಮಾನ ನಿಲ್ದಾಣದಿಂದ ನೇರವಾಗಿ ಖಾಸಗಿ ಹೋಟೆಲ್​ಗೆ ತೆರಳಿ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಪ್ರಹ್ಲಾದ್​ ಜೋಶಿ ಪರ ಮತಯಾಚನೆ ಮಾಡಲಿದ್ದಾರೆ. ನಂತರ ಹೋಟೆಲ್‌ಗೆ ತೆರಳಿ ಧಾರವಾಡ ಲೋಕಸಭಾ ವ್ಯಾಪ್ತಿಯ ಸ್ಥಳೀಯ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv