ಭೀಮಳ್ಳಿ ಕ್ರಾಸ್​ ಬಳಿ ಅಪರಿಚಿತ ಶವ ಪತ್ತೆ

ಕಲಬುರ್ಗಿ: ಕಲಬುರ್ಗಿ ತಾಲೂಕಿನ ಭೀಮಳ್ಳಿ ಕ್ರಾಸ್​ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಸುಮಾರು 40 ವರ್ಷ ವಯಸ್ಸಿನ ವ್ಯಕ್ತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರಬಹುದು ಎನ್ನಲಾಗಿದೆ. ಈ ಸಂಬಂಧ ಕಲಬುರ್ಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv