ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಹುಬ್ಬಳ್ಳಿ: ಜಿಲ್ಲೆಯ ಕಲಘಟಗಿ ತಾಲೂಕಿನ ಉಗ್ಗಿನಕೆರೆ ಗ್ರಾಮದ ಹೊರವಲಯದಲ್ಲಿ 32 ವರ್ಷ ವಯಸ್ಸಿನ ಅಪರಿಚಿತ ಯುವಕನ ಮೃತ ದೇಹ ಪತ್ತೆಯಾಗಿದೆ. ಯುವಕನ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿವೆ. ಕುತ್ತಿಗೆಯನ್ನ ಕೊಯ್ದು ಕೊಲೆ ಮಾಡಿ ಶವವನ್ನ ಬಿಸಾಡಿದ್ದಾರೆ ಅಂತಾ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಕಲಘಟಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.