ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಿಕ್ಕ ಅಪರಿಚಿತ

ತುಮಕೂರು: ಅಪರಿಚಿತ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ತುಮಕೂರಿನ ಕ್ಯಾತ್ಸಂದ್ರದಲ್ಲಿ ನಡೆದಿದೆ. ಪಾಳುಬಿದ್ದ ಲಾಡ್ಜ್ ಒಂದರಲ್ಲಿ ಈತ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಿಕ್ಕಿದ್ದು, ಈತನ ಮೃತದೇಹನನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವ್ಯಕ್ತಿಯ ಹಿನ್ನೆಲೆ ಇನ್ನೂ ಪತ್ತೆಯಾಗಿಲ್ಲ. ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.