ಮಾಜಿ ಸಚಿವ ವಿ.ಸೋಮಣ್ಣ ಹೀಗೆ ಮಾಡಿದ್ದೇಕೆ?

ಬೆಂಗಳೂರು : ಚಾಮರಾಜನಗರ ಜಿಲ್ಲಾ ಉಸ್ತುವಾರಿಯಿಂದ ತನ್ನನ್ನು ಕೈಬಿಡುವಂತೆ ಬಿಜೆಪಿ ಮುಖಂಡ ವಿ.ಸೋಮಣ್ಣ, ಪಕ್ಷದ ರಾಜ್ಯಾಧ್ಯಕ್ಷರಿಗೆ ಮನವಿ ಮಾಡಿದ್ದಾರೆ. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸೋಮಣ್ಣ, ಚಾಮರಾಜನಗರ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಹೊಣೆ ನೀಡಿದೆ. ಆದ್ರೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನಪ್ಪ ತಮ್ಮ ತೇಜೋವಧೆ ಮಾಡುತ್ತಿದ್ದಾರೆ. ಹೀಗಾಗಿ ತಮ್ಮನ್ನು ಜಿಲ್ಲಾ ಉಸ್ತುವಾರಿಯಿಂದ ಬಿಡುಗಡೆ ಮಾಡಿ ಎಂದು ಕೋರಿದ್ದಾರೆ.

ಮಲ್ಲಿಕಾರ್ಜುನಪ್ಪ ವಿರುದ್ಧ ಆರೋಪ

ಪಕ್ಷದ ಸೂಚನೆ ಮೇರೆಗೆ ನಾನು ಹಾಸನ ಹಾಗೂ ಚಾಮರಾಜನಗರ ಜಿಲ್ಲೆಯ ಉಸ್ತುವಾರಿಯನ್ನು ಪ್ರಮಾಣಿಕವಾಗಿ ನಿರ್ವಹಿಸುತ್ತಿದ್ದೆ. ಆದ್ರೆ ಚಾಮರಾಜನಗರದಲ್ಲಿ ಪಕ್ಷ ಜಿಲ್ಲಾಧ್ಯಕ್ಷರಾದ ಮಲ್ಲಿಕಾರ್ಜುನಪ್ಪನವರು ಸುಳ್ಳನ್ನೇ ಬಂಡವಾಳ ಮಾಡಿಕೊಂಡು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಪತ್ರದಲ್ಲಿ ಆರೋಪಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿರುವ ಕಾಂಗ್ರೆಸ್​ನ ರಾಮಚಂದ್ರಪ್ಪ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ವಿಚಾರದಲ್ಲಿ ತನ್ನನ್ನು ಖಳನಾಯಕನಂತೆ ಬಿಂಬಿಸುತ್ತಿದ್ದಾರೆ. ಅಲ್ಲದೇ, ನನ್ನನ್ನು ಉಸ್ತುವಾರಿಯಿಂದ ಕೆಳಗಿಳಿಸುವಂತೆ ಮಲ್ಲಿಕಾರ್ಜುನಪ್ಪ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಇದ್ರಿಂದ ತನಗೆ ತೀವ್ರ ನೋವಾಗಿದ್ದು, ಚಾಮರಾಜನಗರ ಉಸ್ತುವಾರಿಯಿಂದ ತನ್ನನ್ನು ಬಿಡುಗಡೆ ಮಾಡಬೇಕೆಂದು ಕೋರುತ್ತೇನೆ ಎಂದು ಪತ್ರದಲ್ಲಿ ಸೋಮಣ್ಣ ತಿಳಿಸಿದ್ದಾರೆ.

Leave a Reply

Your email address will not be published. Required fields are marked *