ವಡ್ನಾಳ್ ಗುರುಪೀಠದ ಗುರು ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

ದಾವಣಗೆರೆ:  ವಡ್ನಾಳ್ ವಿಶ್ವ ಕರ್ಮ ಗುರುಪೀಠದ ಗುರುಸ್ವಾಮೀಜಿಯವರು ಪ್ರಯಾಣಿಸುತ್ತಿದ್ದ ಕಾರು,​ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸಿಮೆಂಟ್ ಕಂಬಕ್ಕೆ ಡಿಕ್ಕಿ ಹೊಡೆದು ಜಮೀನಿನಲ್ಲಿ ಪಲ್ಟಿಯಾಗಿದೆ. ಚನ್ನಗಿರಿ ತಾಲೂಕಿನ ಕಾಕನೂರ ಗ್ರಾಮದ ಬಳಿ ಘಟನೆ ನಡೆದಿದೆ.

ಸ್ವಾಮೀಜಿ ಹಾಗೂ ಕಾರ್ ಚಾಲಕ ಗಾಯಗೊಂಡಿದ್ದು, ಅವರನ್ನ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ವಾಮೀಜಿ  ಕಾರ್ಯಕ್ರಮವೊಂದನ್ನ ಮುಗಿಸಿ ಸ್ವಗ್ರಾಮ ಚನ್ನಗಿರಿ ತಾಲೂಕಿನ ವಡ್ನಾಳ್ ಗ್ರಾಮಕ್ಕೆ ವಾಪಸ್ಸಾಗುವಾಗ ಘಟನೆ ಸಂಭವಿಸಿದೆ. ಘಟನೆ ಕುರಿತು ಸಂತೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv