ಬೆಂಕಿಯಲ್ಲಿ ಬೇಯುತ್ತಿದೆ ಬಂಡೀಪುರದ ಕಾಡು..!

ಚಾಮರಾಜ ನಗರ: ಕಳೆದೆರಡು ಎರಡು ದಿನಗಳಿಂದ ಬಂಡೀಪುರ ರಾಷ್ಟ್ರೀಯ ಉದ್ಯಾನದ ಸುತ್ತಮುತ್ತಲಿನಲ್ಲಿ ಕಾಣಿಸಿಕೊಂಡಿದ್ದ ಕಾಡ್ಗಿಚ್ಚು ಇನ್ನಷ್ಟು ಪ್ರದೇಶಗಳಿವೆ ವ್ಯಾಪಿಸುತ್ತಲೇ ಇದೆ. ನಿನ್ನೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ವ್ಯಾಪಿಸಿದ್ದ ಬೆಂಕಿ ರಾತ್ರಿ ಮದುಮಲೈ ಹಾಗೂ ಮದುಮರಕೈ ಪ್ರದೇಶದ ಅರಣ್ಯಪ್ರದೇಶಕ್ಕೂ ವ್ಯಾಪಿಸಿದೆ. ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಗೆ ಬರುವ ಗೋಪಾಲಸ್ವಾಮಿ ಬೆಟ್ಟ ವಲಯದ ಕೆಬ್ಬೇಪುರ– ಚೌಡಹಳ್ಳಿ ಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ಕಂಡು ಬಂದ ಬೆಂಕಿ ಮಗುವಿನಹಳ್ಳಿ ಜಾರ್ಕಲ್ಲು ಕ್ವಾರಿ ಗುಡ್ಡ, ಗುಮ್ಮನಗುಡ್ಡ, ಬಾಳೆತಾರ್ಕೊರೆ ಗುಡ್ಡ, ಗೌರಿ ಕಲ್ಲು ಬೆಟ್ಟದವರೆಗೆ ವ್ಯಾಪಿಸಿದೆ. ನಾಗರಹೊಳೆ ಉದ್ಯಾನದ ಸೊಳ್ಳೇಪುರ ಬಳಿ ಕಾಡ್ಗಿಚ್ಚಿಗೆ 35 ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ. ಚಾಮರಾಜನಗರ ಸಮೀಪದ ಕರಿವರದರಾಜನ ಬೆಟ್ಟ, ಯಡಬೆಟ್ಟ ಹಾಗೂ ಅಮಚವಾಡಿ ಸಮೀಪದ ಎಣ್ಣೆಹೊಳೆ ಬೆಟ್ಟಗಳಲ್ಲೂ ಕಾಡ್ಗಿಚ್ಚು ಕಾಣಿಸಿಕೊಂಡು, ಸುಮಾರು 200ಕ್ಕೂ ಹೆಚ್ಚು ಎಕರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ವಯಂ ಸೇವಕರು ಸೇರಿದಂತೆ 500ಕ್ಕೂ ಹೆಚ್ಚು ಮಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಇನ್ನೂ ಘಟನೆಯ ಗಂಭೀರತೆಯನ್ನು ಅರಿತ ಸಿಎಂ ಬಂಡೀಪುರ ಮೀಸಲು ಅರಣ್ಯ ಪ್ರದೇಶದಲ್ಲಿನ ಅಗ್ನಿ ದುರಂತ ನೋವನ್ನುಂಟುಮಾಡಿದೆ. ಇಲ್ಲಿ ತಕ್ಷಣವೇ ಪರಿಸ್ಥಿತಿಯನ್ನು ಹತೋಟಿಗೆ ತರಲು ತಕ್ಷಣ ಕ್ರಮ ಕೈಗೊಳ್ಳಲಾಗಿದೆ. ಪರಿಸರ ಹಾಗೂ ವನ್ಯಜೀವಿಗಳಿಗೆ ಹೆಚ್ಚಿನ ಹಾನಿಯುಂಟಾಗದಂತೆ ನಿಗಾ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv