ಬಿಸಿಲ ನಾಡಿನಲ್ಲಿ ವಾಟಾಳ್​​ ಮತಯಾಚನೆ

ರಾಯಚೂರು: ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ, ನಗರದಲ್ಲಿಂದು ಪಕ್ಷೇತರ ಅಭ್ಯರ್ಥಿ, ಕನ್ನಡಪರ ಹೋರಾಟಗಾರ ವಾಟಾಳ್​ ನಾಗರಾಜ್​ ಮತ ಯಾಚನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಾಟಾಳ್​​ ನಾಗರಾಜ್ ಮತಯಾಚನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಅಖಂಡ ಕರ್ನಾಟಕದ ಸಮಸ್ಯೆಗಳ ಬಗ್ಗೆ ನಿರಂತರ ಹೋರಾಟ ಮಾಡುತ್ತಿದ್ದೇವೆ. ಹೈದ್ರಾಬಾದ್ ಕರ್ನಾಟಕದ ಅಭಿವೃದ್ಧಿ ಹಾಗೂ ರೈತರ ಸಾಲ ಮನ್ನಾಕ್ಕಾಗಿ ಇನ್ನೂ ಹದಿನೈದು ದಿನಗಳಲ್ಲಿ ಕರ್ನಾಟಕ ಬಂದ್​ಗೆ ಕರೆ ನೀಡುತ್ತೇವೆ ಎಂದು ತಿಳಿಸಿದರು. ನಮ್ಮಲ್ಲಿ ಯಾವುದೇ ಪ್ರಾದೇಶಿಕ ಭಿನ್ನಾಭಿಪ್ರಾಯ ಇಲ್ಲ. ವಿಧಾನ ಪರಿಷತ್ ಸದಸ್ಯನಾದರೆ ನಿರುದ್ಯೋಗ ಪದವಿಧರರಿಗೆ ಉದ್ಯೋಗ ಕೊಡಿಸಲು ಪ್ರಯತ್ನಿಸುತ್ತೇನೆ ಎಂದು ಭರವಸೆ ನೀಡಿದರು.

ನಿಮ್ಮ ಸಲಹೆ, ಸೂಚನೆ, ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv