ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ವಾಟಾಳ್ ನಾಗರಾಜ್‌ರಿಂದ ಪ್ರೊಟೆಸ್ಟ್

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನ ವಿರೋಧಿಸಿ ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್ ಮೈಸೂರು ಬ್ಯಾಂಕ್ ಬಳಿ ಪ್ರತಿಭಟನೆ ನಡೆಸಿದ್ರು. ಮೈಸೂರು ಬ್ಯಾಂಕ್ ಸರ್ಕಲ್‌ನಿಂದ ಮೆಜಿಸ್ಟಿಕ್‌ವರೆಗೆ ಸೈಕಲ್ ಏರಿ ವಿನೂತನವಾಗಿ ಪ್ರತಿಭಟನೆ ಮಾಡಿದ್ರು. ಪ್ರತಿಭಟನೆಗೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಕೂಡಾ ಸಾಥ್ ನೀಡಿದ್ರು. ಇನ್ನು ರಾಜ್ಯ ಸರ್ಕಾರ ಸಂಪೂರ್ಣ ಸಾಲ ಮನ್ನಾ ಮಾಡದೇ ಇದ್ದಲ್ಲಿ. ಮುಂಬರುವ ದಿನಗಳಲ್ಲಿ ರಾಜ್ಯ ಬಂದ್ ಮಾಡುವುದಾಗಿ ವಾಟಾಳ್ ನಾಗರಾಜ್ ಇದೇ ವೇಳೆ ಎಚ್ಚರಿಕೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv