ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಬೆಳಗಾವಿಗೆ ಆಗಮನ

ಬೆಳಗಾವಿ:  ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಸಂಜೆ ನಗರಕ್ಕೆ ಆಗಮಿಸಿದ್ದಾರೆ. ರಾತ್ರಿ ನಗರದಲ್ಲಿಯೇ ವಾಸ್ತವ್ಯ ಮಾಡಲಿರುವ ಉಪ ರಾಷ್ಟ್ರಪತಿ, ಗುರುವಾರ (ಏ. 25) ನಡೆಯಲಿರುವ ಕೆ.ಎಲ್.ಇ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಆಂಡ್ ರೀಸರ್ಚ್ ಸಂಸ್ಥೆಯ 9ನೇ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಡಾ.ಪ್ರಭಾಕರ್ ಕೋರೆ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ಐಹೊಳೆ, ಉತ್ತರ ವಲಯ ಐಜಿಪಿ ಎಚ್.ಜಿ.ಆರ್. ಸುಹಾಸ್, ಪೊಲೀಸ್ ಆಯುಕ್ತರಾದ ಬಿ.ಎಸ್. ಲೋಕೇಶ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಸುಧೀರ್​ಕುಮಾರ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಡಾ.ಬೂದೆಪ್ಪ ಹೆಚ್.ಬಿ., ಕೆ.ಎಲ್.ಇ. ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ವಿ.ಡಿ.ಪಾಟೀಲ್ ಅವರು ಸ್ವಾಗತಿಸಿದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv