ಕಾಂಗ್ರೆಸ್​ ಪರ ಪ್ರಚಾರಕ್ಕೆ ಬಂದ ಜೆಡಿಎಸ್​​ ಜಿಲ್ಲಾಧ್ಯಕ್ಷ, ಮಸೀದಿಯಲ್ಲೇ ಕೂಡಿ ಹಾಕಿದ ಜನ..!

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಯಕ್ಕುಂಗಿ ಗ್ರಾಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿಯನ್ನು ಮಸೀದಿಯಲ್ಲಿ ಭಂಧಿಸಿರುವ ಘಟನೆ ನಡೆದಿದೆ. ಲೋಕಸಭೆ ಚುನಾವಣೆ ಮತ ಪ್ರಚಾರಕ್ಕೆ ಹೋಗಿದ್ದ ವೇಳೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ ಎಸ್ ಸಾಧುನವರ್ ಪರ ಪ್ರಚಾರ ಮಾಡಿದ್ದಕ್ಕಾಗಿ ಗ್ರಾಮಸ್ಥರು ಈತನನ್ನು ಭಂದಿಸಿದ್ದು, ನಂತರ ಪೊಲೀಸರ ಮಧ್ಯಪ್ರದೇಶದಿಂದಾಗಿ ಶಂಕರ ಮಾಡಲಗಿಯನ್ನು ಗ್ರಾಮಸ್ಥರು ಬಿಟ್ಟು ಕಳುಹಿಸಿದ್ದಾರೆ. ನಮ್ಮ ಗ್ರಾಮದಲ್ಲಿ ಯಾವುದೇ ಅಭಿವೃದ್ಧಿಯಾಗಿಲ್ಲ ಎಂದು ಆರೋಪಿಸಿರುವ ಗ್ರಾಮಸ್ಥರು, ಯಾವ ಕಾರಣಕ್ಕಾಗಿ ಇಲ್ಲಿಗೆ ಪ್ರಚಾರಕ್ಕೆ ಆಗಮಿಸಿದ್ದೀರಿ? ಎಂದು ಆಕ್ರೋಶ ವ್ಯಕ್ತ

ಅಂದ್ಹಾಗೆ ಇನ್ನೂ ಮುಂದೆ ಯಾವುದೇ ರಾಜಕೀಯ ಮುಖಂಡರು ಗ್ರಾಮ ಪ್ರವೇಶಿಸದಂತೆ ಗ್ರಾಮಸ್ಥರು ಸೂಚನೆ ನೀಡಿದ್ದು, ಲೋಕಸಭೆ ಚುನಾವಣೆ ಬಹಿಷ್ಕಾರ ಹಾಕೋ ಬಗ್ಗೆ ಗ್ರಾಮಸ್ಥರು ಚಿಂತನೆ ನಡೆಸಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv