ಧಾರವಾಡ ಟಿಕೆಟ್​ ಹಂಚಿಕೆ ಗೊಂದಲ, ಸಿದ್ದರಾಮಯ್ಯರನ್ನ ಭೇಟಿಯಾದ ವಿನಯ್ ಕುಲಕರ್ಣಿ

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್​ ಮಾಜಿ ಸಂಸದ ಐ.ಜಿ‌ ಸನ್ನದಿ ಪುತ್ರ ಶಾಕಿರ್ ಸನದಿಗೆ ಫೈನಲ್ ಆಗಿದೆ ಎಂಬ ವದಂತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡ್ತಿದೆ. ಕಾಂಗ್ರೆಸ್ ವರಿಷ್ಠರ ಫೇಕ್ ಪತ್ರದೊಂದಿಗೆ ಸುದ್ದಿ ಹರಿದಾಡುತ್ತಿರೋ ಹಿನ್ನೆಲೆ ಮಾಜಿ ಸಚಿವ ವಿನಯ್​ ಕುಲಕರ್ಣಿ, ನಿನ್ನೆ ತಡರಾತ್ರಿ ಮಾಜಿ ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಹುಬ್ಬಳ್ಳಿಯ ಡೆನಿಸನ್ಸ್ ಹೋಟೆಲ್‌ನಲ್ಲಿ ಸಿದ್ದರಾಮಯ್ಯರನ್ನ ಭೇಟಿಯಾಗಿ, ಟಿಕೆಟ್​ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನು ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ತನಗೇ ಕೊಡಿಸುವಂತೆ ವಿನಯ್​, ರಾಜ್ಯ ನಾಯಕರಾದ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಎಂ.ಬಿ ಪಾಟೀಲ್​ ಕಡೆಯಿಂದ ಕಾಂಗ್ರೆಸ್ ವರಿಷ್ಠರ ಮೇಲೆ ಒತ್ತಡ ಹಾಕುತ್ತಿದ್ದಾರೆ ಎನ್ನಲಾಗಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv