ಕುಲಕರ್ಣಿಗೆ ಮತ್ತೆ ಸಂಕಷ್ಟ, ಕೊಲೆ ಪ್ರಕರಣ ತನಿಖೆ ಮಾಡುವಂತೆ ಕೋರ್ಟ್ ಆದೇಶ

ಧಾರವಾಡ: ಮೈತ್ರಿ ಕೂಟದ ಲೋಕಸಭಾ ಚುನಾವಣಾ ಅಭ್ಯರ್ಥಿ, ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸಂಕಷ್ಟ ಎದುರಾಗಿದೆ.  ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಭಂದಪಟ್ಟಂತೆ ಸಾಕ್ಷಿಗಳ ಮೇಲೆ ಒತ್ತಡ ಹಾಗೂ ಜೀವ ಬೆದರಿಕೆ ಹಾಕಿದ ಆರೋಪ ಹಿನ್ನೆಲೆಯಲ್ಲಿ ವಿನಯ್​​ ಕುಲಕರ್ಣಿ ವಿರುದ್ಧ  ಕೇಸ್ ದಾಖಲಿಸಿಕೊಂಡು ತನಿಖೆ ಮಾಡುವಂತೆ ಕೋರ್ಟ್ ಸೂಚನೆ ನೀಡಿದೆ.  ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ, ಪೊಲೀಸ್ ಅಧಿಕಾರಿಗಳಾದ ತುಳಜಪ್ಪ ಸುಲ್ಪಿ ಹಾಗೂ ಚಂದ್ರಶೇಖರ್ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳುವಂತೆ ಜೆಎಂಎಫ್‌ಸಿ ನ್ಯಾಯಾಲಯ ಸೂಚನೆ ನೀಡಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv