ವಿಶ್ವ ಹಿಂದು ಪರಿಷತ್, ಭಜರಂಗದಳದಿಂದ ಪ್ರತಿಭಟನೆ

ಕೊಡಗು: ಕಲಬುರಗಿ ಜಿಲ್ಲೆಯ ವಾಣಿಜ್ಯ ತೆರಿಗೆ ಉಪ ಆಯುಕ್ತ ಇರ್ಷಾದ್ ಉಲ್ಲಾಖಾನ್ ಹಾಗೂ ಅವರ ಪತ್ನಿ ಹಿಂದುಗಳನ್ನು ಮತಾಂತರ ಮಾಡುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ವಿಶ್ವ ಹಿಂದು ಪರಿಷತ್, ಭಜರಂಗದಳ ವತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.
ಹಿಂದುಗಳನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡುತ್ತಿರುವುದರ ವಿರುದ್ಧ ತನಿಖೆ ಮಾಡಬೇಕು. ಮಧ್ಯಪ್ರದೇಶದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಹಿಂದುಗಳ ಕಳ್ಳಸಾಗಣೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಹಾಗೂ ಇನ್ನೂ ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಿದ್ರು. ಈ ವೇಳೆ ಎಸಿ ರಮೇಶ್ ಕೋನರೆಡ್ಡಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv