ಮಳೆಹಾನಿ ಪ್ರದೇಶಕ್ಕೆ ತಹಶೀಲ್ದಾರ್ ಭೇಟಿ

ಉತ್ತರ ಕನ್ನಡ : ಜಿಲ್ಲೆಯಾದ್ಯಂತ ಭರ್ಜರಿ ಮಳೆಯಾಗುತ್ತಿದ್ದು, ಮಲೆನಾಡು ಭಾಗದ ಶಿರಸಿ, ಸಿದ್ದಾಪುರ ಸುತ್ತಮುತ್ತ ಮಳೆಯ ಪ್ರಮಾಣ ಜಾಸ್ತಿಯಾಗಿದೆ.
ಭಾರೀ ಮಳೆಯಿಂದ ಹಾನಿಗೊಳಗಾದ ಸಿದ್ದಾಪುರ ತಾಲೂಕಿನ ಆರೆಂದೂರು, ಅಕ್ಕುಂಜಿ, ಕವಂಚೂರು, ಗ್ರಾಮಗಳಿಗೆ ಸಿದ್ದಾಪುರ ತಹಶೀಲ್ದಾರ್ ಪಟ್ಟರಾಜ ಗೌಡ ಇಂದು ಭೇಟಿ ನೀಡಿದ್ದಾರೆ. ಈ ಗ್ರಾಮಗಳಲ್ಲಿ ಈಗಾಗಲೇ ರೈತರು ಬಿತ್ತನೆ ಮಾಡಿದ್ದು ಭಾರೀ ಮಳೆಯಿಂದಾಗಿ ಬೆಳೆ ಹಾನಿ ಸಂಭವಿಸಿದ್ದು ತಹಶೀಲ್ದಾರ್ ಕಂದಾಯ ನಿರೀಕ್ಷಕರು ಹಾಗೂ ಗ್ರಾಮಲೆಕ್ಕಿಗರೊಂದಿಗೆ ಪರಿಶೀಲನೆ ನಡೆಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv