ವಿಶ್ವ ತಂಬಾಕು ರಹಿತ ದಿನಾಚರಣೆ ಹಿನ್ನೆಲೆ ಜಾಗೃತಿ ಜಾಥಾ

ಯಾದಗಿರಿ: ವಿಶ್ವ ತಂಬಾಕು ರಹಿತ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು. ಜಾಥಾವು ನಗರದ ಸುಭಾಷ್ ವೃತ್ತದಿಂದ ಆರಂಭವಾಗಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ತಂಬಾಕು ಸೇವೆನೆಯ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಯಿತು. ಬಳಿಕ ನಗರದ ತಹಶೀಲ್ದಾರ್​​​ ಕಚೇರಿಯ ಆವರಣದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಇಂದಿನಿಂದ ಜಿಲ್ಲೆಯಲ್ಲಿ ತಂಬಾಕು ಸೇವನೆ ಮುಕ್ತವಾಗಬೇಕೆಂದು ಪ್ರತಿಜ್ಞೆ ಮಾಡುವ ಮೂಲಕ ಗಮನ ಸೆಳೆದರು. ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಹಾಗೂ ನೂರಾರು ಸಾರ್ವಜನಿಕರು, ಮಹಿಳೆಯರು ವಿಶ್ವ ತಂಬಾಕು ರಹಿತ ದಿನಾಚರಣೆ ಜಾಥಾದಲ್ಲಿ ಭಾಗವಹಿಸಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv