ರಸ್ತೆ ದಾಟುವ ವೇಳೆ ಯುವಕನಿಗೆ ಕಾರು ಡಿಕ್ಕಿ: ಯುವಕ ಸಾವು

ಧಾರವಾಡ: ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ದಾಟುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮೃತ ಯುವಕನನ್ನು ಮುಮ್ಮಿಗಟ್ಟಿ ಗ್ರಾಮದ ಕರೆಪ್ಪ ನಾಯ್ಕರ್​ (18) ಎಂದು ಗುರುತಿಸಲಾಗಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಾರು ಚಾಲಕ ಸಮೇತ ಗರಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಯುವಕನ ಸಂಬಂಧಿಗಳಿಂದ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಹೆದ್ದಾರಿ ಬಂದ್​ ಮಾಡಿದ್ದರಿಂದ ವಾಹನ ಸವಾರರು ಪರದಾಡುವ ಸ್ಥಿತಿ ಎದುರಾಗಿತ್ತು.