‘ಪಕ್ಷದಲ್ಲಿ ಯಾರು ರೂಲ್ಸ್ ಮಾಡ್ತಾರೋ, ಯಾರು ಮುರಿತಾರೋ ಗೊತ್ತಿಲ್ಲ’

ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಯಾರು ರೂಲ್ಸ್ ಮಾಡ್ತಾರೋ, ಯಾರು ಮುರಿತಾರೋ ಎಂಬುವುದೇ ಯಕ್ಷ ಪ್ರಶ್ನೆ ಆಗಿದೆ ಅಂತಾ ಸಚಿವ ಸ್ಥಾನ ವಂಚಿತೆ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಫಸ್ಟ್​ನ್ಯೂಸ್ ಜೊತೆ ಮಾತನಾಡಿದ ಅವರು, ನಾನು‌ ಪಕ್ಷಕ್ಕಾಗಿ ದುಡಿದಿದ್ದೇನೆ. ನನ್ನ ಹೆಸರು ಕೈ ಬಿಟ್ಟಿದ್ದಕ್ಕೆ ಬೇಸರವಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಎಂಎಲ್‌ಸಿ ಕೋಟಾದಡಿಯಲ್ಲಿ ಸಚಿವ ಸ್ಥಾನ‌ ನೀಡುವುದಿಲ್ಲ ಎಂದು ಮೋಟಮ್ಮ ಅವರಿಗೆ ಸ್ಥಾನ‌ ತಪ್ಪಿಸಿದ್ದಾರೆ ಎಂದು ಆರೋಪಿಸಿದರು. ಆದ್ರೆ ಏಕಾಏಕಿ ಮತ್ತೆ ಜಯಮಾಲಾ ಅವರಿಗೆ ಸಚಿವ ಸ್ಥಾನ‌ ನೀಡಿರುವುದು ಅಚ್ಚರಿ ತಂದಿದೆ ಎಂದರು. ಯಾವ ಮಾನದಂಡದ‌ ಮೇಲೆ ಜಯಮಾಲಾ ಅವರಿಗೆ ಸಚಿವ ಸ್ಥಾನ ನೀಡಿದ್ದಾರೆ ಅಂತಾ ಗೊತ್ತಾಗುತ್ತಿಲ್ಲ ಎಂದರು. ಕಾಣುವ ಮತ್ತು ಕಾಣದ ಕೈಗಳು ಕೆಲಸ ಮಾಡಿ ನನಗೆ ಸಚಿವ ಸ್ಥಾನ ತಪ್ಪಿಸಿವೆ. ಪಕ್ಷದ ಸಭೆಯಲ್ಲಿ ನನಗೆ ಆಗಿರುವ ಅನ್ಯಾಯವನ್ನು ಪ್ರಶ್ನಿಸುತ್ತೇನೆ ಎಂದರು. ಬೆಳಗಾವಿ ಜಿಲ್ಲೆಯಲ್ಲಿ ಅತಿ ಹೆಚ್ಚು ಸ್ಥಾನವನ್ನ ಕಾಂಗ್ರೆಸ್ ಗೆದ್ದಿದೆ. ಎಂಟು ಜನ ಶಾಸಕರು ಆಯ್ಕೆಯಾಗಿದ್ದಾರೆ. ದೊಡ್ಡ ಜಿಲ್ಲೆಯಾಗಿರುವುದರಿಂದ ಎರಡು ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv