ಪತ್ನಿ ಹತ್ಯೆ: 11 ದಿನದಲ್ಲೇ ಪತಿಗೆ ಜೀವಾವಧಿ ಶಿಕ್ಷೆ ..!

ಚಿತ್ರದುರ್ಗ: ಜಿಲ್ಲಾ ಸತ್ರ ನ್ಯಾಯಾಲಯದಿಂದ ಇಂದೊಂದು ಐತಿಹಾಸಿಕ ತೀರ್ಪು ಪ್ರಕಟಗೊಂಡಿದೆ. ಅದೂ ಹತ್ಯೆ ನಡೆದ ಕೇವಲ 11 ದಿನಗಳಲ್ಲಿಯೇ ತೀರ್ಪು ನೀಡಿದ ಖ್ಯಾತಿ ಜಿಲ್ಲಾ‌ ನ್ಯಾಯಾಧೀಶ ಎಸ್.ಬಿ. ವಸ್ತ್ರಮಠ್ ಸಲ್ಲುತ್ತದೆ.
ಪತ್ನಿಯ ಶೀಲ ಶಂಕಿಸಿ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ದಿನಾಂಕ 27 ಜೂನ್ 2018ರಂದು ಚಳ್ಳಕೆರೆ ತಾಲೂಕಿನ ವಲಸೆ ಗ್ರಾಮದಲ್ಲಿ ಕೊಲೆ ನಡೆದಿತ್ತು. ಪ್ರಕರಣವನ್ನು ತಳಕು ಠಾಣೆಯ ಪೊಲೀಸರು ತೀವ್ರಗತಿಯಲ್ಲಿ ತನಿಖೆ ನಡೆಸಿ, ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಇದರ ವಿಚಾರಣೆ ನಡೆಸಿದ ಜಿಲ್ಲಾ ಸತ್ರ ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ನೀಡಿದೆ. ಪರಮೇಶ್ವರ್ (75) ಶಿಕ್ಷೆಗೀಡಾದ ಅಪರಾಧಿಯಾಗಿದ್ದು, ಪತ್ನಿ ಪುಟ್ಟಮ್ಮ ಎನ್ನುವವರನ್ನು ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಲೆ ಮಾಡಿದ್ದ. ಇಂದು ಆರೋಪ ಸಾಬೀತಾಗಿದ್ದು ಶಿಕ್ಷೆಗೆ ಗುರಿಯಾಗಿದ್ದಾನೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv