ಶಾಸಕ ಬಸವರಾಜ ಶಿವಣ್ಣನವರಿಗೆ ಟಿಕೆಟ್ ಕೈತಪ್ಪಿದ್ದಕ್ಕೆ ಭಿನ್ನಮತ

ಹಾವೇರಿ: ಬ್ಯಾಡಗಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ ಶಿವಣ್ಣನವರಿಗೆ ಟಿಕೆಟ್ ತಪ್ಪಿದ ಹಿನ್ನೆಲೆ ಹಾವೇರಿ ಕಾಂಗ್ರೆಸ್​ನಲ್ಲಿ ಭಿನ್ನಮತ ಭುಗಿಲೆದ್ದಿದೆ. ಬ್ಯಾಡಗಿ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಸ್ ಆರ್ ಪಾಟೀಲ್ ಗೆ ಟಿಕೆಟ್ ಘೋಷಣೆಯಾಗಿರುವುದರಿಂದ ಗೊಂದಲ ತಲೆದೋರಿದೆ.
ಹಾವೇರಿ ಶಿವಶಕ್ತಿ ಪ್ಯಾಲೇಸ್ ನಲ್ಲಿ ನಡೆದ ಸಭೆಯಲ್ಲಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವನಗೌಡ ಶೀಡೆನೂರ ಕಾಂಗ್ರೆಸ್ ಅಭ್ಯರ್ಥಿ ಎಸ್ ಆರ್ ಪಾಟೀಲ್ ಗೆ ಬೆಂಬಲಿಸುವಂತೆ ಮನವಿ ಮಾಡಿದರು. ಜಿಲ್ಲಾಧ್ಯಕ್ಷರ ಮಾತಿಗೆ ಅಲ್ಲಿದ್ದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ನಡೆಯುತ್ತಿದ್ದ ಸಭೆಯಲ್ಲಿ ಬಸವರಾಜ ಶಿವಣ್ಣನವರ ಬೆಂಬಲಿಗರು ಇದನ್ನು ಖಂಡಿಸಿದರು. ಇದೇ ಸಂದರ್ಭದಲ್ಲಿ ಬೆಂಬಲಿಗರು ಶಿವಣ್ಣನವರಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದರು.

Leave a Reply

Your email address will not be published. Required fields are marked *