‘ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನದ ವಿಚಾರವಾಗಿ ಪ್ರತಿಕ್ರಿಯಿಸುವುದಿಲ್ಲ’

ರಾಯಚೂರು: ಸತೀಶ್ ಜಾರಕಿಹೊಳಿಗೆ ಸಚಿವ ಸ್ಥಾನ ಕೊಡುವ ವಿಚಾರವಾಗಿ ಪ್ರತಿಕ್ರಿಯಿಸುವುದಿಲ್ಲ ಅಂತಾ ಸಹೋದರ ಸಚಿವ ರಮೇಶ್​ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಬಗ್ಗೆ ಪ್ರತಿಕ್ರಿಯಿಸಿ ವಿವಾದ ಆಗಿದೆ. ಇದು ಕುಟುಂಬದ ವಿಷಯ. ಹೀಗಾಗಿ ಪ್ರತಿಕ್ರಿಯಿಸಬಾರದು ಅಂತಾ ನಿರ್ಧರಿಸಿರುವೆ ಎಂದು ತಿಳಿಸಿದರು.
ಖಾಸಗಿ ಕೃಷಿ ಕಾಲೇಜುಗಳನ್ನ ಶಾಶ್ವತವಾಗಿ ರದ್ದುಗೊಳಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಸಚಿವರು ಭೇಟಿ ನೀಡಿ ಮನವಿ ಸ್ವೀಕರಿಸಿದರು. ಈ ವೇಳೆ ಮಾತನಾಡಿದ ಅವರು, ನಾವೂ ಸಹ ರೈತರ ಮಕ್ಕಳು. ಯಾವುದೇ ಕಾರಣಕ್ಕೂ ಕೃಷಿ ವಿವಿ ಖಾಸಗೀಕರಣಕ್ಕೆ ಬಿಡಲ್ಲ. ಈ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv