ರಮೇಶ್​​ ಜಾರಕಿಹೊಳಿ ಕಾಂಗ್ರೆಸ್ ಪರ ನಿರ್ಧಾರ ಕೈಗೊಂಡ್ರೆ ಮಾತ್ರ ಬೆಂಬಲ: ಲಖನ್ ಜಾರಕಿಹೊಳಿ

ಬೆಳಗಾವಿ: ರಮೇಶ್​ ಜಾರಕಿಹೊಳಿ ಕಾಂಗ್ರೆಸ್ ಪರ ನಿರ್ಧಾರ ಕೈಗೊಂಡ್ರೆ ಅಷ್ಟೆ ಅವರಿಗೆ ನಮ್ಮ ಬೆಂಬಲವಿದೆ ಎಂದು ಅವರ ಸಹೋದರರಾದ ಲಖನ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸದ್ಯ ಲೋಕಸಭೆ ಚುನಾವಣೆ ಬಗ್ಗೆ ನಾವು ಗಮನ ಹರಿಸಿದ್ದೇವೆ. ನಮ್ಮ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ.  ನಾನು ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡುತ್ತಿದ್ದೇನೆ. ಎಲ್ಲಾ ಸಹೋದರರು ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ. ಮಾಜಿ ರಮೇಶ್ ಜಾರಕಿಹೊಳಿ ಬಗ್ಗೆ ನಾನು ಈಗ ಏನು ಹೇಳಲ್ಲ. ಆದ್ರೆ ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸುವುದು ನಮ್ಮ ಗುರಿ. ನಾನು ಕಾಂಗ್ರೆಸ್ ಪಕ್ಷದಲ್ಲಿಯೇ‌ ಇದ್ದೇನೆ. ಅವರು ಬೇರೆ ಪಕ್ಷಕ್ಕೆ ಹೋಗಿ ಬಂದಿದ್ದಾರೆ. ನಾನು ಎಲ್ಲೂ ಹೋಗಿ ಹಾಳಾಗಿಲ್ಲ ಕಾಂಗ್ರೆಸ್ ಪಕ್ಷದಲ್ಲಿಯೇ ಇದ್ದೇನೆ ಎಂದರು. ಇನ್ನು ರಮೇಶ ಜಾರಕಿಹೊಳಿ ಬಿಜೆಪಿ ಬೆಂಬಲಿಸಲು ಹೇಳಿಕೆ ನೀಡಿದ್ದಾರೆ ಎಂಬ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು ಗೋಕಾಕ್ ಕಾಂಗ್ರೆಸ್ ಭದ್ರಕೋಟೆ ಅಂತಾ ಹೇಳಿದ್ರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv