ಅತೃಪ್ತರ ಜೊತೆ ವೇಣುಗೋಪಾಲ್ ಸಂಧಾನ ಯಶಸ್ವಿಯಾಗುತ್ತಾ..?

ಬೆಂಗಳೂರು: ಸಚಿವ ಸ್ಥಾನ ಸಿಗದ ಅತೃಪ್ತ ಕಾಂಗ್ರೆಸ್ ಶಾಸಕರ ಜೊತೆ ಇಂದು ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ. ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವು ಅತೃಪ್ತರು ಬೆಳಗ್ಗೆ 11 ಗಂಟೆಗೆ ನಡೆಯುವ ಸಭೆಗೆ ಹಾಜರಾಗಲಿದ್ದಾರೆ.

 

ಕುಮಾರಕೃಪಾದಲ್ಲಿ ವೇಣುಗೋಪಾಲ್ ಅತೃಪ್ತರ ಮನವೊಲಿಸುವ ಪ್ರಯತ್ನ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಆಪ್ತ ಮೂಲಗಳು ಮಾಹಿತಿ ನೀಡಿವೆ.

 

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv