ಅವೈಜ್ಞಾನಿಕ ಮ್ಯಾನ್​ಹೋಲ್​​, ಯುವತಿ ಬಲಿ

ಕಲಬುರ್ಗಿ: ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರಿ ಮಾಡ್ತಿದ್ದ ಯುವತಿ, ರಸ್ತೆ ಮೇಲಿರುವ ಉಬ್ಬಿದ ಮ್ಯಾನ್ ಹೋಲ್​ ಮೇಲೆ ಚಲಿಸುವಾಗ ಆಯ ತಪ್ಪಿ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದರು. ಬಳಿಕ, ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೃತ ಯುವತಿಯನ್ನು ಆಶಾ (25) ಎಂದು ಗುರುತಿಸಲಾಗಿದೆ.
ಮೊನ್ನೆ ರಾತ್ರಿ ದ್ವಿಚಕ್ರ ವಾಹನದಲ್ಲಿ ​ತೆರಳುತ್ತಿದ್ದ ವೇಳೆ ಆಶಾ, ರಸ್ತೆಯಿಂದ ಮೇಲೆ ಬಂದಿದ್ದ ಮ್ಯಾನ್​​ಹೋಲ್ ನಿಂದಾಗಿ​​ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ನಿನ್ನೆ ಸಂಜೆ ವೇಳೆಗೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಇನ್ನು ಅವೈಜ್ಞಾನಿಕ ಮ್ಯಾನ್ ಹೋಲ್ ನಿರ್ಮಾಣದಿಂದಾಗಿ ಯುವತಿ ಸಾವನ್ನಪ್ಪಿದ್ದಾಳೆ ಅಂತಾ ಆರೋಪಿಸಿ, ಕುಟುಂಬಸ್ಥರು ಯುಜಿಡಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಕಲಬುರ್ಗಿ ಮಹಾನಗರ ಪಾಲಿಕೆ ಎದುರು ಯುವತಿಯ ಶವವಿಟ್ಟು ಪ್ರತಿಭಟನೆ ನಡೆಸಿದ್ರು. ಈ ವೇಳೆ ಅವೈಜ್ಞಾನಿಕ ಮ್ಯಾನ್ ಹೋಲ್ ಸರಿಪಡಿಸಬೇಕು, ಹಾಗೂ ಸೂಕ್ತ ಪರಿಹಾರ ನೀಡಬೇಕು ಅಂತಾ ಒತ್ತಾಯಿಸಿದ್ರು. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv