ಪೇದೆ ಮೇಲೆ ರೇಪ್​ ಯತ್ನ: ಕಾಮುಕನ ಬಂಧನ

ಬೆಂಗಳೂರು: ಪೊಲೀಸ್ ಕಾನ್ಸ್​ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಯುವತಿಯನ್ನು ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಉಪ್ಪಾರಪೇಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಜಮಖಂಡಿಯ ಅಮೀನ್ ಸಾಬ್ (24) ಎಂದು ತಿಳಿದು ಬಂದಿದೆ. ಈ ಹಿಂದೆ ಬಿಜಾಪುರದಲ್ಲಿ ಪಿಎಸ್ಐ ಹಾಗೂ ಕೆಎಎಸ್ ತರಬೇತಿಗೆಂದು ತೆರಳಿದ್ದ ವೇಳೆ ಇಬ್ಬರ ನಡುವೆ ಪರಿಚಯವಾಗಿತ್ತು. ನಂತರ ಇಬ್ಬರ ನಡುವೆ ಪ್ರೀತಿ ಮೂಡಿತ್ತು. ಬಳಿಕ ಯುವತಿಗೆ ಬೆಂಗಳೂರು ನಗರದ ಠಾಣೆಯೊಂದರಲ್ಲಿ ಕೆಲಸ ಸಿಕ್ಕಿತ್ತು. ಆರೋಪಿಯು, ಯುವತಿಗೆ ವಾಟ್ಸ್ ಆಪ್ ನಲ್ಲಿ ವಿಡಿಯೋ ಕಾಲ್ ಮಾಡಿ, ಪೀಡಿಸುತ್ತಿದ್ದ. ಮೊದಲು ಯುವತಿಯನ್ನು ಮದುವೆಯಾಗುವುದಾಗಿ ಹೇಳಿ, ಬಳಿಕ ಉಲ್ಟಾ ಹೊಡೆದಿದ್ದ. ಈ ಮಧ್ಯೆ, ಕಾಮುಕ ಆಕೆಯನ್ನು ಮೆಜೆಸ್ಟಿಕ್​ನಲ್ಲಿ ಖಾಸಗಿ ಲಾಡ್ಜ್ ಗೆ ಕರೆಸಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಈ ಸಂಬಂಧ ಯುವತಿ ಜೂನ್ 7ರಂದು ಉಪ್ಪಾರಪೇಟೆ ಪೊಲೀಸರಿಗೆ ದೂರು ನೀಡಿದ್ದರು. ದೂರನ್ನು ದಾಖಲಿಸಿಕೊಂಡಿದ್ದ ಉಪ್ಪಾರಪೇಟೆ ಪೊಲೀಸರು ಆರೋಪಿ ಆಮೀನ್ ಸಾಬ್ ನನ್ನು ಬಂಧಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv