ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ.!

ಉಡುಪಿ: ಕಳೆದ ಮಂಗಳವಾರದಂದು ನಾಪತ್ತೆಯಾಗಿದ್ದ ಮಹಿಳೆ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮದ ಸಿಲ್ವಿಯಾ ಎಂಬ ಮಹಿಳೆ ಮಂಗಳವಾರದಂದು ನಾಪತ್ತೆಯಾಗಿದ್ದರು. ಈ‌ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತೀವ್ರ ಹುಡುಕಾಟ ನಡೆಸಿದ್ದರು. ಅದರಂತೆ ಇಂದು ಬೆಳಗ್ಗೆ ಮನೆಯಿಂದ ಸ್ವಲ್ಪ ದೂರದಲ್ಲಿ ಇರುವ ಬೇರೆಯವರ ಖಾಸಗಿ ತೋಟದ ಬಾವಿಯಲ್ಲಿ ಶವ ಪತ್ತೆಯಾಗಿದೆ. ಕುಂದಾಪುರ ಪೊಲೀಸರಿಂದ ಪರಿಶೀಲನೆ ನಡೆಯುತ್ತಿದ್ದು, ಆತ್ಮಹತ್ಯೆ ಮಾಡಕೊಂಡಿರಬೇಕೆಂಬ ಶಂಕೆ ವ್ಯಕ್ತವಾಗಿದೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv