ಕಾಂಗ್ರೆಸ್​ ಸರ್ಕಾರವಿದ್ದಾಗ 2 ಲಕ್ಷ ಕೋಟಿ ಸಾಲ, ರಾಜ್ಯದ ಜನರಿಗೇ ಹೊರೆ: ಜಾದವ್

ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್​-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿರುವ ಹೆಚ್.ಡಿ. ಕುಮಾರಸ್ವಾಮಿ ಚುನಾವಣೆಯ ವೇಳೆ ಪ್ರಣಾಳಿಕೆಯಲ್ಲಿ ರೈತರ ಸಾಲ ಮನ್ನಾ ಮಾಡುತ್ತೇವೆಂದು ಹೇಳಿದ್ರು. ಆದ್ರೀಗ ರೈತರ ಸಾಲ ಮನ್ನಾ ಮಾಡಲ್ಲ ಅಂತ ಹೇಳ್ತಿದ್ದಾರೆ. ಸೋಮವಾರ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯಲಿರುವ ಕರ್ನಾಟಕ ಬಂದ್​ ಕರೆಗೆ ದಾವಣಗೆರೆ ಜಿಲ್ಲಾ ಬಿಜೆಪಿ ಘಟಕದಿಂದ ಸಾಥ್​ ನೀಡುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಯಶವಂತರಾವ್ ಜಾದವ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹೆಚ್​ಡಿಕೆ ರೈತರ ಸಾಲ ಮನ್ನಾ ಮಾಡಬೇಕೆಂದು ಒತ್ತಾಯಿಸಿ ರಾಜ್ಯಾದಂತ ಬಂದ್​ಗೆ ಕರೆ ನೀಡಲಾಗಿದೆ. ರಾಜ್ಯದಲ್ಲಿ ರಚನೆಯಾಗಿರುವ ಕಾಂಗ್ರೆಸ್​-ಜೆಡಿಎಸ್​ ಮೈತ್ರಿ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ. ಅಧಿಕಾರಕ್ಕೆ ಬಂದರೆ 24 ಗಂಟೆಯೊಳಗೆ ರಾಜ್ಯದ ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆಂದು ಹೆಚ್​ಡಿಕೆ ಹೇಳಿದ್ರು. ಈಗ ಮಾತು ತಪ್ಪಿದ್ದಾರೆ. ಬಿಜೆಪಿ ಸರ್ಕಾರ ಅಚ್ಚೇ ದಿನ್​ ಸರ್ಕಾರ. ದೇಶದ ಜನರಿಗೆ ಪ್ರಧಾನಿ ನರೇಂದ್ರ ಮೋದಿ ಖಾತೆಗೆ 15 ಲಕ್ಷ ಹಣ ಹಾಕುತ್ತೇನೆಂದು ಯಾವ ಪ್ರಣಾಳಿಕೆಯಲ್ಲೂ ಹೇಳಿಕೊಂಡಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರವಿದ್ದಾಗ 2 ಲಕ್ಷ ಕೋಟಿ ಸಾಲ ಮಾಡಿಕೊಂಡಿದ್ದಾರೆ. ಈ ಸಾಲ ರಾಜ್ಯದ ಜನರಿಗೇ ಹೊರೆಯಾಗಿದೆ ಅಂತ ಕಾಂಗ್ರೆಸ್​- ಜೆಡಿಎಸ್​ ಸರ್ಕಾರದ ವಿರುದ್ಧ ಯಶವಂತರಾವ್ ಜಾದವ್ ಕಿಡಿಕಾರಿದ್ರು.