ದಾವಣಗೆರೆ-ಚಿತ್ರದುರ್ಗ ಜಿಲ್ಲಾ ನಾಯಕರ ಜೊತೆ ಬಿಎಸ್​ವೈ ಸಭೆ

ಚಿತ್ರದುರ್ಗ: ದಾವಣಗೆರೆ-ಚಿತ್ರದುರ್ಗ ಜಿಲ್ಲೆಗಳ ಬಿಜೆಪಿ ಶಕ್ತಿ ಕೇಂದ್ರ ಪ್ರಮುಖರ ಸಭೆಯಲ್ಲಿ ಭಾಗವಹಿಸಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್​. ಯಡಿಯೂರಪ್ಪ ಆಗಮಿಸಲಿದ್ದಾರೆ. ನಗರದ ಮುರುಘಾ ಮಠದ ಅನುಭವ ಮಂಟಪದಲ್ಲಿ ಸಭೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಬಿಜೆಪಿ‌ ಶಕ್ತಿ ಕೇಂದ್ರ ಸಭೆ ನಡೆಯಲಿದೆ. ಸಭೆಯ ಬಳಿಕ ಮಧ್ಯಾಹ್ನ 1 ಗಂಟೆಗೆ ಹಳೆ ಮಾಧ್ಯಮಿಕ ಶಾಲಾ‌ ಆವರಣದಲ್ಲಿ ನಡೆಯುವ ಸಿದ್ದರಾಮೇಶ್ವರ ಜಯಂತಿಯಲ್ಲಿ ಯಡಿಯೂರಪ್ಪ ಭಾಗವಹಿಸಲಿದ್ದಾರೆ. ಜಯಂತಿಯುವು ಭೋವಿ ಗುರುಪೀಠದ ಹಿಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstne