‘ಸಚಿವ ಮಹೇಶ್ ರಾಜೀನಾಮೆ ಅಂಗೀಕರಿಸಬೇಕೋ, ಬೇಡ್ವೋ: ಇನ್ನೂ ನಿರ್ಧರಿಸಿಲ್ಲ’

ಬೆಂಗಳೂರು: ಸಚಿವ ಎನ್.ಮಹೇಶ್ ರಾಜೀನಾಮೆ ನೀಡಿರೋದು ಬಿಎಸ್​ಪಿ ಪಕ್ಷದ ಆಂತರಿಕ ವಿಚಾರ. ಪಕ್ಷದ‌ ಸಂಘಟನೆಗಾಗಿ ರಾಜೀನಾಮೆ ಕೊಟ್ಟಿರಬಹುದು. ಆದ್ರೆ ಅವರ ರಾಜೀನಾಮೆ ಅಂಗೀಕಾರ ಮಾಡಬೇಕೋ, ಬೇಡವೋ ಮುಂದೆ ನೋಡೋಣ ಎಂದು ಮುಖ್ಯಮಂತ್ರಿ ಹೆಚ್​. ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬಿಎಸ್​ಪಿ ನಾಯಕರು ನಿರಂತರ ಸಂಪರ್ಕದಲ್ಲಿದ್ದಾರೆ:
ವಿಧಾನಸೌಧದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಹೇಶ್ ರಾಜೀನಾಮೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು ಕೆಲ ವಿಷಯಗಳನ್ನ ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ನನ್ನ ಜೊತೆ ಬಿಎಸ್​ಪಿ ನಾಯಕರು ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಊಹಾಪೋಹ ಸುದ್ದಿಗಳಿಗೆಲ್ಲಾ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಸಮಯ ಬಂದಾಗ ಎಲ್ಲ ಮಾತನಾಡುತ್ತೇನೆ ಎಂದು ಅವರು ಸಿಎಂ ಹೇಳಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv