‘ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅಗತ್ಯ’

ಬಳ್ಳಾರಿ: ವಿಶ್ವ ಯೋಗ ದಿನದ ಹಿನ್ನೆಲೆ ನಗರದಲ್ಲಿಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಜಿಲ್ಲಾಡಳಿತ, ಆಯುಷ್ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್​ ವತಿಯಿಂದ ಯೋಗ ದಿನ ಹಮ್ಮಿಕೊಳ್ಳಲಾಗಿತ್ತು. ಮುನ್ಸಿಪಲ್ ಮೈದಾನದಲ್ಲಿ ಸೇರಿದ್ದ ಸಾರ್ವಜನಿಕರು ಸಾಮೂಹಿಕವಾಗಿ ಯೋಗಾಭ್ಯಾಸ ಮಾಡಿದ್ರು. ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಅರುಣ್ ರಂಗರಾಜನ್ ದೈಹಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿಯೊಬ್ಬರೂ ಯೋಗ ಮಾಡಬೇಕು ಅಂತಾ ಕರೆ ಕೊಟ್ಟರು. ಜಿಲ್ಲಾ ಮಟ್ಟದ ಹಲವಾರು ಅಧಿಕಾರಿಗಳು ಹಾಗೂ ಸಾರ್ವಜನಿಕರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv