ಗ್ರಾಮದಲ್ಲಿ ಯುವಕನ ಶವ ಇಟ್ಟು ಪೊಲೀಸರ ವಿರುದ್ಧ ಪ್ರತಿಭಟನೆ..!

ಶಿವಮೊಗ್ಗ: ಯುವಕ ಸುದರ್ಶನ್ ಆತ್ಮಹತ್ಯೆಗೆ ಪೊಲೀಸರ ಕಿರುಕುಳವೇ ಕಾರಣ ಎಂದು ಆರೋಪಿಸಿ ಶಿಕಾರಿಪುರ ತಾಲೂಕಿನ ಹಿತ್ತಲ ಗ್ರಾಮದ ಗ್ರಾಮಸ್ಥರು ಪೊಲೀಸರಿಗೆ ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು. ಕಳೆದ ತಿಂಗಳು ಈ ಗ್ರಾಮದಲ್ಲಿ ಬೆಸಿಗೆ ಶಿಬಿರ ಏರ್ಪಡಿಸಲಾಗಿತ್ತು. ಶಿಬಿರದಲ್ಲಿ ಮಾರ್ಚ್​ 27 ರಂದು ಗಲಾಟೆ ನಡೆದಿತ್ತು. ಈ ಗಲಾಟೆಯಲ್ಲಿ ಸುದರ್ಶನ್ ಭಾಗಿಯಾಗಿದ್ದಾನೆಂದು ಆರೋಪಿಸಿ ಪೊಲೀಸರು ಕರ್ಕೊಂಡು ಹೋಗಿ ಹಿಗ್ಗಾಮುಗ್ಗಾ ಥಳಿಸಿದ್ದರು. ಇದರಿಂದ ನೊಂದಿದ್ದ ಸುದರ್ಶನ್ ಆತ್ಮಹತ್ಯೆ ಮಾಡಿಕೊಂಡಿದ್ದ. ಇದನ್ನು ಖಂಡಿಸಿ ಇಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಸುದರ್ಶನ್ ಆತ್ಮಹತ್ಯೆಗೆ ಪೊಲೀಸರೇ ಕಾರಣ ಅಂತಾ ಗ್ರಾಮಸ್ಥರು ಆರೋಪಿಸಿದ್ದಾರೆ. ಪ್ರತಿಭಟನೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಗ್ರಾಮಸ್ಥರು ಸೇರಿದ್ದರು. ಈ ವೇಳೆ ಯುವಕನ ಶವವನ್ನು ಗ್ರಾಮದಲ್ಲಿಟ್ಟು ಆತ್ಮಹತ್ಯೆಗೆ ಕಾರಣವಾಗಿರುವ ಪೊಲೀಸರು ಸ್ಥಳಕ್ಕೆ ಬರಬೇಕೆಂದು ಆಗ್ರಹಿಸಿದ್ದಾರೆ. ಅಲ್ಲದೇ ಸ್ಥಳಕ್ಕೆ ಶಿವಮೊಗ್ಗ ಎಸ್​ಪಿ ಸ್ಥಳಕ್ಕೆ ಬರದ ಹೊರತು ಶವಸಂಸ್ಕಾರ ಮಾಡಲ್ಲ ಅಂತಾ ಹಟ ಹಿಡಿದು ಕೂತಿದ್ದಾರೆ. ಹಿತ್ತಲ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರೋದ್ರಿಂದ ಕೆಎಸ್​ಆರ್​ಪಿ ಸಿಬ್ಬಂದಿ ಸೇರಿದಂತೆ 600 ಹೆಚ್ಚು ಪೊಲೀಸರು ಗ್ರಾಮಕ್ಕೆ ಭದ್ರತೆ ಒದಗಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv