ಕವಿವಿ ಗಾಂಧೀ ಭವನದಲ್ಲಿ ವಲಯ ಯುವ ಜನೋತ್ಸವ

ಧಾರವಾಡ: ಕರ್ನಾಟಕ ವಿಶ್ವ ವಿದ್ಯಾಲಯದ ಗಾಂಧೀ ಭವನದಲ್ಲಿ ಅಂತರ್ ವಲಯ ಯುವ ಜನೋತ್ಸವ ಕಾರ್ಯಕ್ರಮ ನಡೆಯಿತು. ಯುವ ಜನೋತ್ಸವದಲ್ಲಿ ಜಾನಪದ ನೃತ್ಯ, ಡೊಳ್ಳು ಕುಣಿತ, ಕಂಸಾಳೆ, ಸುಗ್ಗಿ ಕುಣಿತ, ಕಾಡು ಜನರ ನೃತ್ಯ ನೆರೆದಿದ್ದ ವಿದ್ಯಾರ್ಥಿಗಳನ್ನು ರಂಜಿಸಿತು.
ವಲಯ ಮಟ್ಟದಲ್ಲಿ ಪ್ರಥಮ, ದ್ವೀತಿಯ ಹಾಗೂ ತೃತೀಯ ಸ್ಥಾನ ಗಳಿಸಿದ ಕಾಲೇಜಿನ ಕಲಾ ತಂಡಗಳು ಅಂತರವಲಯ ಮಟ್ಟಕ್ಕೆ ಆಯ್ಕೆಗೊಂಡಿದ್ದವು. ಕಾರ್ಯಕ್ರಮದಲ್ಲಿ ಗದಗ, ಹಾವೇರಿ, ಶಿರಸಿ, ಸಿದ್ದಾಪುರ ಸೇರಿದಂತೆ ಧಾರವಾಡದ ವಿವಿಧ ಕಾಲೇಜುಗಳು ಪಾಲ್ಗೊಂಡಿದ್ದವು.
ಜಾನಪದ ನೃತ್ಯ, ಕೋಲಾಟ, ಡೊಳ್ಳು ಕುಣಿತದಲ್ಲಿ ಕಾಲೇಜು ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆಗಳಲ್ಲಿ ನೃತ್ಯ ಮಾಡಿದರು. ಈ ಮೂಲಕ ನಶಿಸಿ ಹೋಗುತ್ತಿರುವ ಜಾನಪದ ಕಲೆಯನ್ನು ಉಳಿಸುವ ಸಂದೇಶವನ್ನ ನೀಡಿದರು.
ಕಳೆದ ಮೂರು ನಾಲ್ಕು ವರ್ಷಗಳಿಗೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಯುವ ಜನೋತ್ಸವ ತನ್ನ ಅಸ್ಮಿತೆ ಕಳೆದುಕೊಳ್ಳುತ್ತಿದೆ. ಯುವ ಜನೋತ್ಸವದಲ್ಲಿ ವಿದ್ಯಾರ್ಥಿಗಳಿಂದ ತುಂಬಿ ತುಳುಕುತ್ತಿದ್ದ ಕವಿವಿ ಗಾಂಧೀ ಭವನದಲ್ಲಿ ವಿದ್ಯಾರ್ಥಿಗಳ ಭಾಗವಹಿಸುವಿಕೆ ಕಡಿಮೆಯಾಗಿತ್ತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv