ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನ ಬರ್ಬರ ಹತ್ಯೆ

ಕಲಬುರ್ಗಿ: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಹೊರವಲಯದ ಹಾಗರಗಾ ರೋಡ್ ಬಳಿ ನಡೆದಿದೆ. ಕಳೆದ ರಾತ್ರಿ ದುಷ್ಕರ್ಮಿಗಳು ಯುವಕನನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಫಯಾಜ್ ಶೇಖ್(25 ) ಕೊಲೆಯಾದ ದುರ್ದೈವಿ. ಮೃತ ಯುವಕ ನಗರದ ಖಾಜಾ ಕಾಲೋನಿ ನಿವಾಸಿ. ಇನ್ನಿಬ್ಬರಾದ ಇಮ್ರಾನ್ ಮತ್ತು ಯಾಕೂಬ್ ಮೇಲೆಯೂ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ ಪೀರ್ ಬಂಗಾಲ ದರ್ಗಾದಿಂದ ಈ ಮೂವರನ್ನು ಕಿಡ್ನ್ಯಾಪ್ ಮಾಡಲಾಗಿತ್ತು ಎನ್ನಲಾಗಿದೆ.

ಅಬು ಮೌಲಾನ ಬ್ರದರ್ಸ್ ವಿರುದ್ಧ ಕೊಲೆ ಆರೋಪ ಕೇಳಿ ಬಂದಿದೆ. ಆದ್ರೆ ಕೊಲೆಗೆ ಕಾರಣವೇನೆಂಬುದು ಸದ್ಯಕ್ಕೆ ತಿಳಿದು ಬಂದಿಲ್ಲ. ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv